ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ
Aug 21 2025, 02:00 AM ISTನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ನೀರು ಸಾಕಷ್ಟು ಪ್ರಮಾಣದಲ್ಲಿ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಥಣಿ ತಹಶೀಲ್ದಾರ ಶಿದರಾಯ ಬೋಸಗಿ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ತಂಡ ನದಿ ಪಾತ್ರದ ಹುಲಗಬಾಳಿ ಗ್ರಾಮದ ಮಾಂಗವಸ್ತಿ, ನದಿ ಇಂಗಳಗಾವ, ಸಪ್ತಸಾಗರ, ತೀರ್ಥ ಮತ್ತು ಚಿಕ್ಕೂಡ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.