ಮತ್ತೆ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ
Aug 28 2024, 12:49 AM ISTಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಬ್ಬರ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ಮತ್ತೆ ಉಕ್ಕಿ ಹರಿಯುತ್ತಿದೆ.ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಗಳ ಒಳ ಹರಿವು ಹೆಚ್ಚಾಗಿದ್ದು, ಚಿಕ್ಕೋಡಿ ಉಪವಿಭಾಗದ ಕೃಷ್ಣಾ ನದಿಯ ಕೆಳಹಂತದ ಆರು ಸೇತುವೆ ಜಲಾವೃತಗೊಂಡಿವೆ. ಕಳೆದ 20 ದಿನಗಳ ಹಿಂದೆಯಷ್ಟೇ ನಿರಂತರ ಮಳೆಯಿಂದ ಉಂಟಾಗಿದ್ದ ಕೃಷ್ಣಾ ನದಿ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದ್ದಲ್ಲದೆ ಸಾವಿರಾರು ಜನ ನಿರಾಶ್ರಿತರ ಶಿಬಿರ ಸೇರಿದ್ದರು.