ಕಾರವಾರದಲ್ಲಿ ನೂತನವಾಗಿ ನಿರ್ಮಿಸಿರುವ ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಆದರೆ ಕಾಳಿ ಸೇತುವೆ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅಧಿಕಾರಿಗಳು ಹಾಗೂ ರಾಜಕಾರಣಿಗಳ ನಿರ್ಲಕ್ಷ್ಯದಿಂದ ಪ್ರತಿಬಾರಿ ಕೊಡೇಕಲ್ ಬಳಿ ಬಸವಸಾಗರ ಜಲಾಶಯ ಭರ್ತಿಯಾದಾಗ ಹೆಚ್ಚುವರಿ ನೀರು ವ್ಯರ್ಥವಾಗುತ್ತಲೇ ಇದೆ. ನೀರಿನ ಕ್ರೂಢಿಕರಣ ಸಮಸ್ಯೆ ಇರುವುದರಿಂದ 2ನೇ ಬೆಳೆಗೆ ಜಲಾಶಯದ ನೀರು ಸಮರ್ಪಕವಾಗಿ ಸಾಕಾಗುತ್ತಿಲ್ಲ.
ಕಾಳಿ ನದಿ ಹೊಸ ಸೇತುವೆ ಮೇಲೆ ಭಾರಿ ವಾಹನಗಳು ಸಂಚರಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಪರಿಶೀಲಿಸಿ, ಲಿಖಿತವಾಗಿ ವರದಿ ನೀಡಿದ ಆಧಾರದ ಮೇಲೆ ಭಾರಿ ವಾಹನಗಳ ಸಂಚಾರ ಆರಂಭಗೊಂಡಿದೆ.