ವಾರಾಣಸಿಗೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲು ಶುಕ್ರವಾರ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಕ್ಷೇತ್ರದಲ್ಲಿ ಯುವತಿಯೊಬ್ಬಳ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ವಿಮಾನದ ನಿಲ್ದಾಣದಲ್ಲಿಯೇ ಮಾಹಿತಿ ಪಡೆದು ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಬಿಜೆಪಿಗರು ವಿನಾಕಾರಣ ಕಾಂಗ್ರೆಸ್ ಸರ್ಕಾರವನ್ನು ಪ್ರಶ್ನಿಸುತ್ತಿದ್ದಾರೆ. ಪೆಟ್ರೋಲ್ ಬೆಲೆ ಏರಿಕೆ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲು ಪ್ರಶ್ನಿಸಲಿ, ಬಿಜೆಪಿ ಸುಳ್ಳುಗಾರರ ಪಕ್ಷ, ಅವರಿಗೆ ಸಾರಿಗೆ ಇಲಾಖೆಯ ನೌಕರರ ಬಗ್ಗೆ ಕಾಳಜಿ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದರು.
ಭಾರತದ ಷೇರುಪೇಟೆಯಲ್ಲಿ ಸೋಮವಾರ ಭಾರಿ ಹೊಯ್ದಾಟ ಆಗುತ್ತಿದ್ದಂತೆಯೇ ಈ ವಿದ್ಯಮಾನಗಳ ಮೇಲೆ ಪ್ರಧಾನಿ ನರೇಂದ್ರ ಮೋದಿ ನಿಗಾ ವಹಿಸಿದ್ದಾರೆ ಎಂದು ಮೂಲಗಳು ಹೇಳಿವೆ