ಪಟ್ಟಣದಲ್ಲಿ ಪ್ರಾರಂಭಗೊಂಡಿರುವ ದಿನದ 24 ಗಂಟೆ ಕುಡಿಯುವ ನೀರು ಸರಬರಾಜು ಕಾಮಗಾರಿ ಯೋಜನೆಯೂ ಕೇಂದ್ರ ಸರ್ಕಾರದ ಪುರಸ್ಕೃತ ಯೋಜನೆ. ಉದ್ಘಾಟನೆ ವೇಳೆ ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಬಳಸಿ ಅಭಿನಂದನೆ ಸಲ್ಲಿಸಬೇಕಿತ್ತು.
ಪ್ರಧಾನಿ ನರೇಂದ್ರ ಮೋದಿಯವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಜನರ ಕೈಗೆ ಹೆಚ್ಚು ಹಣ ನೀಡುವ ‘ಜನರ ಬಜೆಟ್’ ಎಂದು ಬಣ್ಣಿಸಿದ್ದಾರೆ.
ನರೇಂದ್ರ ಮೋದಿ 3.0 ಸರ್ಕಾರದ ಎರಡನೇ ಪೂರ್ಣಾವಧಿ ಬಜೆಟ್ ಅಧಿವೇಶನ ಶುಕ್ರವಾರದಿಂದ ಆರಂಭವಾಗಲಿದೆ. ಬೆಳಿಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ.
ಕೇಂದ್ರ ಸರ್ಕಾರ ಇ -ಶ್ರಮ್ ಯೋಜನೆಯ ಮೂಲಕ ದೇಶದ ಎಲ್ಲಾ ಕೃಷಿ ಕಾರ್ಮಿಕರು, ರೈತರು, ಅಸಂಘಟಿತ ಕಾರ್ಮಿಕರನ್ನು ಇಎಸ್ಐ, ಪಿಎಫ್ ಸೌಲಭ್ಯದ ವ್ಯಾಪ್ತಿಗೆ ತರಲು ನಿರ್ಧರಿಸಿದೆ ಎಂದು ಕೇಂದ್ರ ಕಾರ್ಮಿಕ, ಉದ್ಯೋಗ, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
‘ಮೋದಿ ಸರ್ಕಾರ ಲಕ್ಷಾಂತರ ಕೋಟಿ ರು. ಸಾಲ ಮಾಡಿ ನಮ್ಮ ತಲೆಗಳನ್ನು ಅಡ ಇಟ್ಟಿದೆ ಅಂತಾ ನಾನು ಹೇಳಿದರೆ, ನೀವು ಚಪ್ಪಾಳೆ ಮತ್ತು ಶಿಳ್ಳೆ ಹೊಡೆಯುತ್ತೀರಾ! ನಿಮಗೆ ಸ್ವಲ್ಪ ಬುದ್ಧಿ ಬೇಡ್ವಾ?’ ಎಂದು ಜೋರು ಮಾಡಿದರು. ಆಗ ಸಭಾಂಗಣ ನಗೆಗಡಲಲ್ಲಿ ತೇಲಿತು.
ಕುಂಭಮೇಳಗಳು ವಿವಿಧತೆಯಲ್ಲಿ ಏಕತೆ ಸಾರುತ್ತದೆ ಎಂದು ಶ್ಲಾಘಿಸಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಕಾವೇರಿ ತಟದಲ್ಲಿ ಫೆ.10ರಿಂದ 12ರವರೆಗೆ ಟಿ-ನರಸೀಪುರದಲ್ಲಿ ನಡೆಯುವ ಕುಂಭಮೇಳದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.