ಪ್ರಯಾಗರಾಜ್ದಲ್ಲಿ ನಡೆಯುವ ಮಹಾ ಕುಂಭಮೇಳವು ಏಕತೆಯ ಮಹಾಯಜ್ಞವಾಗಿದೆ. ವಿಕಸಿತ ಭಾರತದ ಕನಸನ್ನು ನನಸು ಮಾಡುವಲ್ಲಿ ಮಹಾ ಕುಂಭಮೇಳವು ತನ್ನದೇ ಕೊಡುಗೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ದೇಶದ ಸಾಂಸ್ಕೃತಿಕ, ಆಧ್ಯಾತ್ಮಿಕ ಸ್ಥಾನವನ್ನು ಮಹಾಕುಂಭ ಸ್ಥಾಪಿಸಲಿದೆ ಎಂದು ಭವಿಷ್ಯ ನುಡಿದರು.