ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಸಚಿವಗೆ ಉರುಳು? ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರ ಬಿಗಿಪಟ್ಟು
May 29 2024, 01:35 AM ISTಕೋಟ್ಯಂತರ ರು. ಹಣ ವರ್ಗಾವಣೆ ಕಾರಣ ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್ ಬರೆದಿಟ್ಟಿರುವ ಡೆತ್‌ನೋಟ್‌ನಲ್ಲಿ, ‘ಸಚಿವರ ಮೌಖಿಕ ಸೂಚನೆ ಮೇರೆಗೆ ಹಣ ವರ್ಗ’ ಎಂಬ ಉಲ್ಲೇಖ ಇರುವುದರಿಂದ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ಸಚಿವರ ರಾಜೀನಾಮೆಗೆ ತೀವ್ರ ಒತ್ತಡ ನಿರ್ಮಾಣ ಮಾಡಲಾರಂಭಿಸಿವೆ.