ಎಚ್ಡಿಸಿಸಿ ಬ್ಯಾಂಕ್ ಚುನಾವಣೆಗೆ ಜೆಡಿಎಸ್ನಿಂದ ನಾಮಪತ್ರ
Aug 09 2025, 12:00 AM ISTಎಚ್ಡಿಸಿಸಿ ಬ್ಯಾಂಕ್ ಚುನಾವಣೆ ಇದೇ ತಿಂಗಳು ೨೧ರಂದು ನಡೆಯಲಿದ್ದು, ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದಂದು ಜೆಡಿಎಸ್ ಪಕ್ಷ ಬೆಂಬಲಿತ ೧೩ ಅಭ್ಯರ್ಥಿಗಳು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ, ಶಾಸಕರಾದ ಎಚ್.ಪಿ. ಸ್ವರೂಪ್, ಸಿ.ಎನ್. ಬಾಲಕೃಷ್ಣ ನೇತೃತ್ವದಲ್ಲಿ ನಾಮಪತ್ರ ಸಲ್ಲಿಸಿದರು. ಆಗಸ್ಟ್ ೨೧ರಂದು ನಡೆಯಲಿರುವ ಎಚ್ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ೧೩ ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಎಲ್ಲಾ ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.