ನಾಮಪತ್ರ ಸಲ್ಲಿಕೆಗೆ ಮುದ್ದಹನುಮೇಗೌಡ ಎತ್ತಿನಗಾಡಿ ಶೋ
Apr 05 2024, 01:05 AM ISTಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇ ಗೌಡರು ಗುರುವಾರ ಎತ್ತಿನಗಾಡಿ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ಮೆರವಣಿಗೆಗೆ ವಿಶೇಷವಾಗಿ ವಾಹನ ಸಿದ್ಧಗೊಂಡಿದ್ದರೂ ಕೊನೆಯ ಗಳಿಗೆಯಲ್ಲಿ ಚಿಕ್ಕಣ್ಣಸ್ವಾಮಿ ದೇವಾಲಯದ ಧರ್ಮದರ್ಶಿ ಪಾಪಣ್ಣ ಅವರು ಸಾರಥಿಯಾಗಿ, ತಾವು ಸಾಕಿರುವ ಎತ್ತುಗಳಿಗೆ ಟೈರ್‌ಗಾಡಿ ಹೂಡಿ, ಅದರಲ್ಲಿ ಲೋಕಸಭಾ ಅಭ್ಯರ್ಥಿ ಎಸ್.ಪಿ.ಮುದ್ದ ಹನುಮೇಗೌಡರು, ಡಾ.ಜಿ.ಪರಮೇಶ್ವರ್, ಕೆ.ಎನ್.ರಾಜಣ್ಣ, ಎಸ್, ಆರ್.ಶ್ರೀನಿವಾಸ್, ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್, ಮಾಜಿ ಸಚಿವ ವೆಂಕಟರವಣಪ್ಪ, ಕೆ.ಎಸ್.ಕಿರಣ್ ಕುಮಾರ್ ಸೇರಿದಂತೆ ಹಲವರು ಟೌನ್‌ಹಾಲ್‌ನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಅಶೋಕ ರಸ್ತೆ ಮೂಲಕ ಮೆರವಣಿಗೆ ನಡೆಸಿ, ನಾಮಪತ್ರ ಸಲ್ಲಿಸಿದರು.