ಇಂದಿನಿಂದ ನಾಮಪತ್ರ ಸ್ವೀಕಾರ: ಡಾ.ಅವಿನಾಶ್
Mar 28 2024, 12:53 AM ISTರಾಮನಗರ: ಕೇಂದ್ರ ಚುನಾವಣಾ ಆಯೋಗದ ಆದೇಶದಂತೆ ಮಾ. 28 ರಿಂದ ಏಪ್ರಿಲ್ 4 ರವರೆಗೆ ಸಾರ್ವತ್ರಿಕ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಒಂದನೇ ಮಹಡಿಯ ಕೊಠಡಿ ಸಂಖ್ಯೆ 205ರಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದರು.