ಸರ್ಕಾರಿ ನೌಕರರ ಸಂಘದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ
Oct 17 2024, 12:08 AM ISTಸರ್ಕಾರಿ ನೌಕರರ ಚುನಾವಣೆ ಹಿನ್ನೆಲೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬೆಂಬಲಿತ ಅಭ್ಯರ್ಥಿಗಳಾದ ನವೀನ್, ಕೃಷ್ಣಪ್ಪ, ಶಶಿಧರ್, ಶಿವಪ್ರಸಾದ ನಾಯಕ್ ನಾಮಪತ್ರ ಸಲ್ಲಿಸಿದರು. ಶಿಕ್ಷಕರ ಸಂಘದ ಅಧ್ಯಕ್ಷ ಸದಾನಂದಮೂರ್ತಿ, ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್, ಪ್ರಾಥಮಿಕ ಶಾಲಾ ಪದವೀಧರ ಶಿಕ್ಷಕರ ಸಂಘದ ಅಧ್ಯಕ್ಷ ದ್ಯಾವೇಗೌಡ ಹಾಗೂ ಶಿಕ್ಷಕರ ಸಂಘದ ನಿರ್ದೇಶಕರು ಸೇರಿದಂತೆ ಸುಮಾರು 200 ಜನ ಶಿಕ್ಷಕರೊಂದಿಗೆ ಬಾಲಕಿಯರ ಪದವಿಪೂರ್ವ ಕಾಲೇಜು ಆವರಣದಲ್ಲಿ ಇರುವ ಚುನಾವಣಾ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.