ದ್ವೈವಾರ್ಷಿಕ ವಿಪ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ
May 09 2024, 01:05 AM ISTಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದ್ದು, ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ. ಮೇ 9ರಿಂದ ಈ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.