ರಾಜ್ಯದ ಜನರಿಗೆ ಶೇ.40 ಸುಳ್ಳು ಹೇಳಿ ಅಧಿಕಾರಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೇ.100 ಭ್ರಷ್ಟರಾಗಿದ್ದು, ಕಮಿಷನ್ ಆರೋಪ ಕಾಂಗ್ರೆಸ್ಸಿನ ಟೂಲ್ ಕಿಟ್ ಎಂಬುದು ಈಗ ಸಾಕ್ಷಿ ಸಮೇತ ರುಜುವಾತಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ.
ಎಚ್.ಡಿ.ದೇವೇಗೌಡರ ಕುಟುಂಬವನ್ನೇ ಕೊಂಡುಕೊಳ್ಳುವ ಬಗ್ಗೆ ಜಮೀರ್ ಅಹಮದ್ ಖಾನ್ ಮಾತನಾಡಿದ್ದಾರೆ.ಈ ದೇಶದ ಪ್ರಧಾನಿ ಆಗಿದ್ದವರನ್ನು ಖರೀದಿ ಮಾಡುತ್ತೇನೆ ಎನ್ನುವ ಅವರ ಮಾತಿನ ಅರ್ಥವೇನು. ನಿನಗೆ ಧೈರ್ಯ ಇದ್ದರೆ ಬಾ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸವಾಲೆಸೆದರು.