ಹಿಂಡನ್‌ಬರ್ಗ್‌ನ ಹೊಸ ಸಂಶೋಧನಾ ವರದಿ ಹಾಗೂ ಸೆಬಿ ಅಧ್ಯಕ್ಷೆ ಮಾಧವಿ ಬುಚ್ ಅವರ ಮೇಲಿನ ಆರೋಪವನ್ನು ಅನುಮೋದಿಸಿದ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ‘ಅತ್ಯಂತ ಅಪಾಯಕಾರಿ ವ್ಯಕ್ತಿ’ ಎಂದು ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣಾವತ್ ಕಿಡಿಕಾರಿದ್ದಾರೆ.
ಅರವಿಂದ ಕೇಜ್ರಿವಾಲ್ ಅಬಕಾರಿ ಹಗರಣದಲ್ಲಿ ಜೈಲು ಸೇರಿರುವ ಕಾರಣ, ಇದೇ ಹಗರಣದಲ್ಲಿ ಬಂಧಿತರಾಗಿ ಈಗಷ್ಟೇ ಜೈಲಿನಿಂದ ಹೊರಬಂದಿರುವ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ದೆಹಲಿ ಮತ್ತು ಹರ್ಯಾಣದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಪ್ರಚಾರ ನೇತೃತ್ವ ವಹಿಸಿಕೊಳ್ಳಲು ಸಜ್ಜಾಗಿದ್ದಾರೆ.
ಹೇಳಿದ್ದೆ ಹೇಳೋ ಕಿಸಬಾಯಿ ದಾಸ ಎಂಬಂತೆ ಸಿದ್ದರಾಮಯ್ಯ ಹೇಳಿದ್ದನ್ನೇ ಹೇಳಿದ್ದಾರೆ. ನೀವು ಅಷ್ಟು ಶುದ್ಧಹಸ್ತರಾಗಿದ್ದರೆ ಸಿಬಿಐಗೆ ಯಾಕೆ ಹೆದರುತ್ತೀರಾ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನಿಸಿದರು.