ಇಂದಿನಿಂದ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ: ಅಮರೇಶ ನಾಯಕ
Jan 30 2024, 02:02 AM ISTಬಾಗಲಕೋಟೆ: ಕುಷ್ಠರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ತಿಳಿಸಿದರು. ಜಿಪಂ ಸಭಾಭವನದಲ್ಲಿ ಸೋಮವಾರ ಕುಷ್ಠರೋಗ ಜಾಗೃತಿ ಅಭಿಯಾನ ಕುರಿತು ಜರುಗಿದ ಅಂತರ ಇಲಾಖೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಷ್ಠರೋಗ ಶಾಪವಲ್ಲ. ಸೂಕ್ತ ಚಿಕಿತ್ಸೆಯಿಂದ ಅಂಗವಿಕಲತೆ ಆಗುವುದನ್ನು ತಡೆಗಟ್ಟಬಹುದಾಗಿದೆ ಎಂದರು.