ಬರ ನಿರ್ವಹಣೆಯ ವಿಫಲತೆಯ ಬಗ್ಗೆ ಸದನದಲ್ಲಿ ಹೋರಾಟ: ಪರಿಷತ್ ವಿಪಕ್ಷ ನಾಯಕ: ಕೋಟ ಶ್ರೀನಿವಾಸ ಪೂಜಾರಿ ಎಚ್ಚರಿಕೆ
Dec 26 2023, 01:30 AM IST ಹಿಂದೆ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯಿಂದ ರಾಜ್ಯದ 54 ಲಕ್ಷ ಕುಟುಂಬಗಳಿಗೆ ಅನುಕೂಲವಾಗಿತ್ತು. ಕೇಂದ್ರ ಸರ್ಕಾರ ನೀಡುವ 6 ಸಾವಿರಕ್ಕೆ ಬಿಜೆಪಿ ಸರ್ಕಾರ 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಸಿದ್ದರಾಮಯ್ಯ ಪ್ರಮಾಣವಚನ ತೆಗೆದುಕೊಂಡ ತಕ್ಷಣ ರದ್ದು ಮಾಡಿದ್ದಾರೆ ಎಂದು ಹರಿಹಾಯ್ದ ಕೋಟ, ಸರ್ಕಾರಕ್ಕೆ ಸಡ್ಡು ಹೊಡೆಯುತ್ತೇವೆ, ಸದನದ ಒಳಗೆ ಹೊರಗೆ ಹೋರಾಟ ಮಾಡುತ್ತೇವೆ ಎಂದು ಪರಿಷತ್ತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.