ಮಾಜಿ ಶಾಸಕ ಸುನೀಲ್ ನಾಯ್ಕ ಆರೋಪ ಸುಳ್ಳು
Oct 23 2023, 12:15 AM ISTಕನ್ನಡಪ್ರಭ ವಾರ್ತೆ ಹೊನ್ನಾವರಸಚಿವ ಮಂಕಾಳು ವೈದ್ಯ ವಿರುದ್ಧ ಮಾಜಿ ಶಾಸಕ ಸುನೀಲ್ ನಾಯ್ಕ ಮಾಡಿರುವ ಆರೋಪ ಸುಳ್ಳು, ಆಧಾರರಹಿತ ಎಂದು ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಹೇಳಿದ್ದಾರೆ.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಶಾಸಕ ಸುನೀಲ್ ನಾಯ್ಕ ಐದು ವರ್ಷಗಳ ಕಾಲ ಸುಳ್ಳು ಹೇಳಿಕೊಂಡೆ ಆಡಳಿತ ಮಾಡಿಕೊಂಡು ಬಂದವರು, ಜನರಿಗೆ ಸರಿಯಾದ ನ್ಯಾಯ ದೊರಕಿಸಿ ಕೊಡಲು ವಿಫಲರಾಗಿ ಸೋತವರು ಎಂದರು.