ಹಿರೇಕೆರೂರಲ್ಲಿ ಹೆಚ್ಚಿದ ಬೀದಿ ನಾಯಿ ಹಾವಳಿ
Dec 09 2023, 01:15 AM ISTಹಿರೇಕೆರೂರು ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಜನರು ಓಡಾಡಲು ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಚಿಕ್ಕಮಕ್ಕಳನ್ನು ಕರೆದೊಯ್ಯುವುದಕ್ಕೆ ಜನರು ಅಂಜುತ್ತಿದ್ದಾರೆ. ಈಗಾಗಲೇ ಹಲವು ಬಾರಿ ಜನರು ಪಪಂಗೆ ಮೌಖಿಕವಾಗಿ ದೂರು ನೀಡಿದ್ದಾರೆ. ಆದರೆ ಯಾವುದೇ ಕ್ರಮವಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೂಡಲೇ ನಾಯಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಬೆಳಗ್ಗೆ ವಾಯು ವಿಹಾರಕ್ಕೆ ತೆರಳುವ ಜನತೆಯ ಮೇಲೂ ನಾಯಿಗಳು ಎರಗಿ ಗಾಯಗೊಳಿಸಿದ ಘಟನೆಗಳು ನಡೆದಿವೆ.