‘ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಚ್‌ಡಿಕೆ ಅಥವಾ ನಿಖಿಲ್ ಅಭ್ಯರ್ಥಿಯಾಗಲಿ’
Mar 16 2024, 01:45 AM ISTಜೆಡಿಎಸ್ ಕಾರ್ಯಕರ್ತರ ಸಭೆ ಆರಂಭವಾದ ಸಮಯದಲ್ಲೇ ಅಭ್ಯರ್ಥಿ ವಿಷಯವಾಗಿ ಕಾರ್ಯಕರ್ತರು ಕೂಗೆತ್ತಿದರು. ಸ್ವಾಗತ ಭಾಷಣಕ್ಕೂ ಅವಕಾಶ ನೀಡದೆ ನಿಮ್ಮ ನಿರ್ಧಾರವನ್ನು ಇಲ್ಲೇ, ಈಗಲೇ ಪ್ರಕಟಿಸಬೇಕೆಂದು ಒತ್ತಾಯಿಸಿದರು. ಇದರಿಂದ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ನಾಯಕರು ಎಷ್ಟೇ ಸಮಾಧಾನ ಮಾಡಿದರೂ ಕಾರ್ಯಕರ್ತರ ಘೋಷಣೆ ಕೂಗುತ್ತಲೇ ಇದ್ದರು. ನಿಮ್ಮಿಬ್ಬರಲ್ಲಿ ಒಬ್ಬರು ಅಭ್ಯರ್ಥಿಯಾಗಲೇಬೇಕೆಂದು ಪಟ್ಟು ಹಿಡಿದರು.