ನಿರ್ಮಲಾ ಅವರು ''ಕರ್ನಾಟಕ ದಿವಾಳಿಯಾಗಿದೆ'' ಎಂದು ಸುಳ್ಳು ಹೇಳುವ ಮೊದಲು ಕೇಂದ್ರ ಸರ್ಕಾರ ಎಷ್ಟು ಲಕ್ಷ ಕೋಟಿ ಸಾಲ ಮಾಡಿದೆ ಎಂಬುದನ್ನು ಅರಿಯಲಿ. ಇದಕ್ಕೂ ಮುನ್ನ ಬಜೆಟ್‌ನಲ್ಲಿ ರಾಜ್ಯಕ್ಕೆ ನೀಡಿರುವ ಕೊಡುಗೆಯ ಪಟ್ಟಿ ಕೊಡಲಿ ಎಂದು ರಾಜ್ಯ ಸಚಿವ ಸಂಪುಟದ ಹಿರಿಯ ಸಚಿವರು ತಿರುಗೇಟು ನೀಡಿದ್ದಾರೆ.
ಕಾಂಗ್ರೆಸ್ ಆಡಳಿತದ ಕರ್ನಾಟಕ ಹಾಗೂ ಹಿಮಾಚಲ ಪ್ರದೇಶದಲ್ಲಿ ಜಾರಿಗೆ ತಂದಿರುವ ಉಚಿತ ಯೋಜನೆಗಳಿಗೆ ಹಣ ನೀಡಲು ಅಲ್ಲಿನ ಸರ್ಕಾರಗಳ ಬಳಿ ಹಣವಿಲ್ಲ. ಅವುಗಳು ಈಗ ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ’ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಟೀಕಿಸಿದ್ದಾರೆ.
ಇದು ''ಜನರಿಂದ, ಜನರಿಗಾಗಿ ಮತ್ತು ಜನರಿಗೋಸ್ಕರ''ದ ಬಜೆಟ್. ಜನರು ಬಯಸಿದ ಬಜೆಟ್! ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ಕೇಂದ್ರ ಬಜೆಟ್ ಅನ್ನು ಬಣ್ಣಿಸಿದ್ದು ಹೀಗೆ.
ನಿರ್ಮಲಾ ಸೀತಾರಾಮನ್ ಅವರು ₹50.65 ಲಕ್ಷ ಕೋಟಿ ವೆಚ್ಚದ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು, ಮಧ್ಯಮವರ್ಗದ ಬಜೆಟ್ ಎಂದು ಬಣ್ಣಿಸಲಾಗಿದೆ. ಈ ಬಜೆಟ್ ಪ್ರಮುಖಾಂಶಗಳು ಇಂತಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ 2025 ಬಗ್ಗೆ ವಿವಿಧ ನಾಯಕರ ಅಭಿಪ್ರಾಯ
ವಿಕಸಿತ ಭಾರತಕ್ಕಾಗಿ ನಿರ್ಮಲಾ ಬಜೆಟ್‌ನಲ್ಲಿ 10 ಅಭಿವೃದ್ಧಿ ಎಂಜಿನ್‌ಗಳು, ರೈತರು, ಯುವಕರು, ಮಹಿಳೆಯರು, ಬಡವರಿಗೆ ಒತ್ತು
₹12 ಲಕ್ಷವರೆಗೆ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ. ಇದರಿಂದ 1 ಕೋಟಿಗೂ ಹೆಚ್ಚು ಜನರು ಆದಾಯ ತೆರಿಗೆ ಕಟ್ಟುವುದರಿಂದ ಮುಕ್ತರಾಗಲಿದ್ದಾರೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಬಾರಿ ಬಿಳಿ ಬಣ್ಣದ ಮಧುಬನಿ ಸೀರೆಯಲ್ಲಿ ಮಿಂಚಿದರು. ಬಿಹಾರದ ಸಾಂಪ್ರದಾಯಿಕ ಕಲೆ ಮಧುಬನಿಯ ಚಿತ್ತಾರವಿರುವ ಬಿಳಿ ಬಣ್ಣದ, ಗೋಲ್ಡನ್ ಬಾರ್ಡರ್ ಸೀರೆ, ಕೆಂಪು ರವಿಕೆ ಧರಿಸಿ ಬಂದಿದ್ದ ಸಚಿವೆ, ಅದರ ಜೊತೆಗೆ ಒಂದು ಶಾಲು ಧರಿಸಿ ಗಮನ ಸೆಳೆದರು.
ಈ ಬಾರಿಯ ಕೇಂದ್ರ ಬಜೆಟ್ ಮಧ್ಯಮವರ್ಗದವರನ್ನು ಓಲೈಸುವಂತಿದೆ. ದೇಶದ ಸಾಮಾನ್ಯ ಜನರಿಗೆ, ಅದರಲ್ಲೂ ವಿಶೇಷವಾಗಿ ದುಡಿಯುವ ವರ್ಗದವರಿಗೆ ಅನುಕೂಲವಾಗುವಂತೆ ತೆರಿಗೆ ವಿನಾಯಿತಿ ಮಿತಿಗಳಲ್ಲಿ ಹೆಚ್ಚಳ ಮಾಡಿರುವುದು ಬಜೆಟ್‌ನ ಕೊಡುಗೆಗಳಲ್ಲಿ ಪ್ರಮುಖವಾಗಿದೆ