ಖಾಸಗಿ ಬೋರ್‌ಗಳ ಬಳಸಿ, ಕುಡಿವ ನೀರು ಸಮಸ್ಯೆ ನೀಗಿ
Mar 31 2024, 02:06 AM ISTಬೇಸಿಗೆ ತಾಪಮಾನ ಹೆಚ್ಚಳವಾಗಿದ್ದು, ಎಲ್ಲ ಕಡೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುವ ನಿರೀಕ್ಷೆ ಹೆಚ್ಚಾಗಿದೆ. ಈ ಹಿನ್ನೆಲೆ ತಕ್ಷಣ ಕುಡಿಯುವ ನೀರಿನ ಸಮರ್ಪಕ ಪೂರೈಕೆಗಾಗಿ ಖಾಸಗಿ ಕೊಳವೆಬಾವಿಗಳನ್ನು ಗುರುತಿಸಬೇಕು. ನೀರಿನ ಸಮಸ್ಯೆ ತಲೆದೋರಿದ ಕಡೆಗಳಲ್ಲಿ ತಕ್ಷಣವೇ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಪರಿಹಾರ ಕಲ್ಪಿಸುವ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷ ಡಾ. ಎಂ.ವಿ. ವೆಂಕಟೇಶ್ ದಾವಣಗೆರೆಯಲ್ಲಿ ಸೂಚಿಸಿದ್ದಾರೆ.