ತಮಿಳುನಾಡಿಗೆ ನೀರು ಬಿಡುಗಡೆ ಖಂಡಿಸಿ ಕನ್ನಡ ಸೇನೆ ಪ್ರತಿಭಟನೆ
Jul 16 2024, 12:37 AM ISTಸಮಿತಿ ಸೂಚನೆಯಂತೆ ಪ್ರತಿನಿತ್ಯ ಒಂದು ಟಿಎಂಸಿ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ. ಬದಲಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲಾಗುವುದು ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಕಾವೇರಿ ಕೊಳ್ಳದ ಜಲಾಶಯಗಳಿಂದ 20 ಸಾವಿರ ಕ್ಯುಸೆಕ್ ನೀರನ್ನು ತಮಿಳುನಾಡಿಗೆ ಹರಿಸುತ್ತಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ತಮಿಳುನಾಡಿಗೆ ನೀರು ಬಿಡುವ ಮೂಲಕ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಮಾಡುತ್ತಿದೆ.