ಕೊಟ್ಟ ಮಾತಿನಂತೆ ‘ಹೇಮೆ’ಯಿಂದ ನುಗ್ಗೇಹಳ್ಳಿ ಕೆರೆಗೆ ನೀರು: ಶಾಸಕ ಸಿ.ಎನ್. ಬಾಲಕೃಷ್ಣ
Jul 30 2024, 12:37 AM ISTನುಗ್ಗೇಹಳ್ಳಿ ಕೆರೆಗೆ ನೀರು ಹರಿಸಲಾಗುತ್ತಿದ್ದು, ಎಲ್ಲೆಂದರಲ್ಲಿ ಕಾಲುವೆಯನ್ನು ಒಡೆದು ಹಾನಿ ಮಾಡಿದರೆ ಅಂಥವರ ವಿರುದ್ಧ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಮೂಲಕ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಬಾಗೂರು ಏತ ನೀರಾವರಿ ಯೋಜನೆಯ ಮೂಲಕ ಯೋಜನೆಯ ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ತುಂಬಿಸಲಾಗುತ್ತದೆ. ರೈತರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ .