ಹೇಮಾವತಿ ಹಾಗೂ ಯಗಚಿ ಜಲಾಶಯದಿಂದ ನೀರು ಬಿಡುಗಡೆ
Jul 26 2024, 01:42 AM ISTಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಹಾಗೂ ಹಾಸನ ತಾಲೂಕುಗಳಲ್ಲಿ ಮಳೆ ತೀವ್ರಗೊಂಡಿದೆ. ಹೀಗಾಗಿ ಜಿಲ್ಲೆಯ ಹೇಮಾವತಿ ಮತ್ತು ಯಗಚಿ ಜಲಾಶಯಗಳು ತುಂಬಿವೆ. ಹೇಮಾವತಿ ನದಿಗೆ ಗುರುವಾರ 36 ಸಾವಿರ ಕ್ಯುಸೆಕ್‌ಗೂ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಕೂಡ ಎರಡೂ ಅಣೆಕಟ್ಟೆಗಳ ಕ್ರಸ್ಟ್ ಗೇಟ್ ತೆರೆದು ಭಾರೀ ಪ್ರಮಾಣ ನೀರನ್ನು ಹೊರಬಿಡಲಾಯಿತು.