ಹೇಮಾವತಿ ಜಲಾಶಯದಿಂದ ನೀರು ಹರಿಸಿ, ರೈತರ ಬೆಳೆ ರಕ್ಷಿಸಿ
Mar 07 2025, 12:47 AM ISTಬೆಳೆದು ನಿಂತಿರುವ ಬೆಳೆಗಳ ಸಂರಕ್ಷಣೆಗೆ ಹೇಮಾವತಿ ಜಲಾಶಯದಿಂದ ಎಡದಂಡೆ ಕಾಲುವೆಗೆ ನೀರು ಹರಿಸಿ ತಾಲೂಕಿನ ಕೆರೆ-ಕಟ್ಟೆಗಳನ್ನು ತುಂಬಿಸಿ, ರೈತರ ಬೆಳೆಗಳನ್ನು ರಕ್ಷಿಸುವಂತೆ ಶಾಸಕ ಎಚ್.ಟಿ.ಮಂಜು ರಾಜ್ಯ ವಿಧಾನಸಭೆಯಲ್ಲಿ ಆಗ್ರಹಿಸಿದರು. ತಾಲೂಕಿನ ಸಾವಿರಾರು ಎಕರೆ ಪ್ರದೇಶದಲ್ಲಿ ಕಬ್ಬು, ಭತ್ತ ಮತ್ತು ತೆಂಗು ಮತ್ತಿತರ ತೋಟಗಾರಿಕಾ ಬೆಳೆಗಳ ರಕ್ಷಣೆ ಮಾಡಿಕೊಳ್ಳಲು ರೈತರು ನೀರಿಗಾಗಿ ಕಾಯುತ್ತಿದ್ದಾರೆ.