ತುಂಗಭದ್ರಾ ಕಾಲುವೆಗೆ ನ.30ರ ವರೆಗೆ ನೀರು
Oct 06 2023, 01:17 AM ISTತುಂಗಭದ್ರಾ ಜಲಾಯಶಯದಲ್ಲಿ ಪ್ರಸ್ತುತ 53 ಟಿಎಂಸಿ ನೀರಿನ ಲಭ್ಯತೆ ಇದೆ. ಮಿತ ಬಳಕೆ, ಕೆಲವೊಂದು ಕಾಲುವೆಗಳಿಗೆ ಕಡಿಮೆ ನೀರು ಪೂರೈಕೆ ಮಾಡುವ ಮೂಲಕ ಎಡದಂಡೆ ಮುಖ್ಯ ಕಾಲುವೆಗೆ 4100 ಕ್ಯೂಸೆಕ್ನಂತೆ ನ.30ರ ವರೆಗೆ ಅಥವಾ ನೀರಿನ ಲಭ್ಯತೆ ಆಧಾರದ ಮೇಲೆ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕನ್ನಡ-ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದ್ದಾರೆ.