ಕಾವೇರಿ ನದಿಗೆ 85 ಸಾವಿರ ಕ್ಯುಸೆಕ್ ನೀರು ಬಿಡುಗಡೆ
Jul 28 2025, 12:30 AM ISTಕೃಷ್ಣರಾಜಸಾಗರದಿಂದ 85 ಸಾವಿರಕ್ಕಿಂತ ಹೆಚ್ಚಿನ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಬಿಡುತ್ತಿರುವುದರಿಂದ ನದಿ ತೀರ ಪ್ರದೇಶಗಳಿಗೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಸೂಚಿಸಲಾಗಿದೆ. ಯಾವುದೇ ಕ್ಷಣದಲ್ಲಾದರೂ ಮತ್ತಷ್ಟು ಹೆಚ್ಚಿನ ನೀರನ್ನು ಕಾವೇರಿ ನದಿಗೆ ಬಿಡುವ ಸಾಧ್ಯತೆ ಇರುವುದರಿಂದ ಕಾವೇರಿ ನದಿ ತೀರದ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಕೂಡಲೇ ಸೂಕ್ತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ ಎಚ್ಚರಿಕೆ ನೀಡಿದ್ದಾರೆ.