ಹಿಂಗಾರು ಹಂಗಾಮು ನೀರು ಪೂರೈಕೆಗೆ ಕ್ರಮ
Nov 22 2024, 01:19 AM ISTಕನ್ನಡಪ್ರಭ ವಾರ್ತೆ ಬಾಗಲಕೋಟೆ ಅಬಕಾರಿ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಆರ್.ಬಿ.ತಿಮ್ಮಾಪೂರ ಅಧ್ಯಕ್ಷತೆಯಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಸಕ್ತ ಸಾಲಿನ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಿದಂತೆ ಡಿಸೆಂಬರ್ 9, 2024ರಿಂದ ಮಾರ್ಚ್ 23, 2025ರವರೆಗೆ ಕಾಲುವೆ ಜಾಗಕ್ಕೆ ನೀರು ಹರಿಸಲಾಗುತ್ತದೆ ಎಂದು ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತದ ಅಧೀಕ್ಷಕ ಅಭಿಯಂತರ ಗೋವಿಂದ ರಾಠೋಡ ತಿಳಿಸಿದ್ದಾರೆ.