ಐದು ದಿನದಲ್ಲಿ ಕೆಆರ್‌ಎಸ್‌ಗೆ ೧೫ ಟಿಎಂಸಿ ನೀರು
Jul 21 2024, 01:17 AM ISTಜಲಾಶಯದಿಂದ ೧೫ ಸಾವಿರ ಕ್ಯುಸೆಕ್ ನೀರನ್ನು ಹೊರಬಿಡುತ್ತಿರುವುದರಿಂದ ಶ್ರೀರಂಗಪಟ್ಟಣ ತಾಲೂಕು ರಂಗನತಿಟ್ಟು ಪಕ್ಷಿಧಾಮದಲ್ಲಿ ದೋಣಿ ವಿಹಾರ ಬಂದ್ ಮಾಡಲಾಗಿದೆ. ನದಿಯಲ್ಲಿ ನೀರಿನ ರಭಸ ಹೆಚ್ಚಿರುವುದರಿಂದ ಮುಂದಿನ ಆದೇಶದವರೆಗೆ ಬಂದ್ ಮಾಡಿದ್ದು, ಪ್ರವಾಸಿಗರ ವೀಕ್ಷಣೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಅಣೆಕಟ್ಟೆಯಿಂದ ನೀರು ಸ್ಥಗಿತಗೊಳಿಸಿದ ನಂತರವಷ್ಟೇ ದೋಣಿವಿಹಾರಕ್ಕೆ ಅವಕಾಶ ನೀಡಲಾಗುವುದು ಎಂದು ಮೈಸೂರು ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ.