ಧಾರ್ಮಿಕ ಚಿಂತನೆಯಿದ್ದಲ್ಲಿ ಮನಸ್ಸಿಗೆ ನೆಮ್ಮದಿ

Nov 01 2025, 01:30 AM IST
ರಾಮನಾಥಪುರ ಹೋಬಳಿಯ ಮಲ್ಲಾಪುರ ಗ್ರಾಮದಲ್ಲಿ ಸುಮಾರು 80 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣವಾದ ಶ್ರೀ ಬಸವೇಶ್ವರಸ್ವಾಮಿ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಧಾರ್ಮಿಕ ಚಿಂತನೆಯಿದ್ದಲ್ಲಿ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ರೇವಣ್ಣ ತಿಳಿಸಿದರು. ಮಾಜಿ ಸಚಿವರು ಹಾಗೂ ಶಾಸಕರು ಎ. ಮಂಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿ ಪರಂಪರೆಯನ್ನು ಇಂದಿನ ದಿನಗಳಲ್ಲಿ ಇಂತಹ ದೇವಾಲಯಗಳನ್ನು ನಿರ್ಮಾಣ ಮಾಡಿ ಜನರನ್ನು ಜಾಗೃತಿಗೊಳಿಸುವ ಕೆಲಸ ಮಾಡುತ್ತಿರುವುದು ಜಾಗೃತಿ ಅಚರಣೆಗಳನ್ನು ಮಾಡಿ ಗ್ರಾಮೀಣ ಜನರ ಶಾಂತಿ ನೆಮ್ಮದಿಯಿಂದ ಬಾಳಲು ಸಹಕಾರಿಯಾಗುತ್ತದೆ ಎಂದರು.