ಬೆಳೆ ವಿಮೆ ನೋಂದಣಿ ಅರಿವು ರೈತರಿಗೆ ಅಗತ್ಯ:ಡೀಸಿ ಡಾ. ಎನ್. ಶಿವಶಂಕರ್
Jul 03 2024, 12:19 AM ISTಆಯಾ ತಾಲೂಕಿನಲ್ಲಿ ಮುಖ್ಯ ಬೆಳೆಗಳಿಗೆ ಗ್ರಾಪಂ, ನಗರ, ಸ್ಥಳೀಯ ಸಂಸ್ಥೆಗಳನ್ನು ವಿಮಾ ಘಟಕವಾಗಿ ಹಾಗೂ ಇತರೆ ಬೆಳೆಗಳಿಗೆ ಹೋಬಳಿಯನ್ನು ವಿಮಾ ಘಟಕವಾಗಿ ಪರಿಗಣಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ ಮತ್ತು ನೀರಾವರಿ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ ಮತ್ತು ನೀರಾವರಿ), ತೊಗರಿ (ಮಳೆಯಾಶ್ರಿತ ಹಾಗೂ ನೀರಾವರಿ), ನೆಲಗಡಲೆ (ಮಳೆಯಾಶ್ರಿತ) ಹುರುಳಿ (ಮಳೆಯಾಶ್ರಿತ) ಮತ್ತು ಟೊಮ್ಯಾಟೋ ಬೆಳೆಗಳನ್ನು ಇತರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ.