ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರಿನ ನಗರ ಪೊಲೀಸರು ಶುಕ್ರವಾರ ಅತುಲ್ ಪತ್ನಿ ನಿಕಿತಾ ಸಿಂಘಾನಿಯಾಗೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗಲು 3 ದಿನಗಳ ಗಡುವು ನೀಡಿದ್ದಾರೆ.
ವೇತನ ಮತ್ತು ಭತ್ಯೆಗಳ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ.31ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನಿರ್ಧರಿಸಿದೆ.
ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣ ಕುರಿತು ಪೊಲೀಸ್ ತನಿಖೆಗೆ ಅನುಮತಿಸಿದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ಸಂಬಂಧ ರಾಜ್ಯಪಾಲರ ಕಚೇರಿಗೆ ವಿಭಾಗೀಯ ಪೀಠ ನೋಟಿಸ್ ಜಾರಿಗೊಳಿಸಿ ತು.
ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಹೊಸದಾಗಿ ನಕ್ಷೆ ಮಂಜೂರು ಮಾಡಲು ನೆಲ ಬಾಡಿಗೆ ಶುಲ್ಕ ಸೇರಿ ವಿವಿಧ ಶುಲ್ಕ ಒಳಗೊಂಡಂತೆ ಒಟ್ಟು ₹17 ಲಕ್ಷ ಪಾವತಿಸಲು ಬಿಬಿಎಂಪಿ ನೋಟಿಸ್ ಸಂಬಂಧ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಕೇಂದ್ರ ಭಾರೀ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದವರ ವಿರುದ್ಧ ಕ್ರಮ ಕೈಗೊಂಡಿಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದರೂ ಅವರನ್ನು ಏನೂ ಮಾಡಿಲ್ಲ. ಆದರೆ ತಮ್ಮ ವಿರುದ್ಧ ಮಾತ್ರ ಪ್ರಕರಣ ದಾಖಲು ಮಾಡುತ್ತಾರೆ