ವಕ್ಫ್ನಿಂದ ನೋಟಿಸ್, ರೈತರ ಪ್ರತಿಭಟನೆ
Oct 29 2024, 12:55 AM ISTಕನ್ನಡ ಪ್ರಭ ವಾರ್ತೆ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರ ಗ್ರಾಮದ ರೈತರಿಗೆ ವಕ್ಫ್ ಆಸ್ತಿ ವಿಚಾರವಾಗಿ ನೋಟಿಸ್ ಜಾರಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕೊಲ್ಹಾರ ತಾಲೂಕು ಘಟಕದ ನೇತೃತ್ವದಲ್ಲಿ ತಹಸೀಲ್ದಾರ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು.ಕೊಲ್ಹಾರ ತಾಲೂಕು ಘಟಕದ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ಪ್ರಭಾರಿ ತಹಸೀಲ್ದಾರ್ ಪಿ.ಜಿ.ಪವಾರ ಮೂಲಕ ಸಕ್ಕರೆ, ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ನೀಡಿರುವ ನೋಟಿಸ್ ಅನ್ನು ತಡೆಹಿಡಿಯಬೇಕೆಂದು ಒತ್ತಾಯಿಸಿದರು.