ಜನತೆಗೆ ಸಾಮಾಜಿಕ ನ್ಯಾಯ ನೀಡಿದ ಮನಮೋಹನ್ ಸಿಂಗ್
Dec 30 2024, 01:03 AM ISTಡಾ. ಮನಮೋಹನ್ ಸಿಂಗ್ ನಮ್ಮನ್ನು ಬಿಟ್ಟು ಹೋಗಿರಬಹುದು. ಆದರೆ, ಅವರು ತಮ್ಮ ಕಾರ್ಯಕ್ರಮಗಳ ಮೂಲಕ ನಮ್ಮ ನಡುವೆ ಜೀವಂತವಾಗಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ಸಾಮಾಜಿಕ ನ್ಯಾಯದ ತತ್ವದ ಅಡಿಯಲ್ಲಿ ಕೆಲಸ ಮಾಡಿ ದೇಶದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ. ನಾವೆಲ್ಲರೂ ಅವರ ಆದರ್ಶ ಉಳಿಸುವ ಕೆಲಸ ಮಾಡಬೇಕು ಎಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ದರ್ಶನಾಪುರವರ ಕಚೇರಿ ಸಹಾಯಕ ಮುನಿಯಪ್ಪ ತಿಳಿಸಿದರು.