ಲಾಠಿಚಾರ್ಜ್‌ ಖಂಡಿಸಿ ಬೀದಿಗಿಳಿದ ಪಂಚಮಸಾಲಿ

Dec 13 2024, 12:46 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಂಚಮಸಾಲಿ ಸಮಾಜಕ್ಕೆ 2ಎ ಮಿಸಲಾತಿ ಒದಗಿಸಬೇಕೆಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಹಮ್ಮಿಕೊಂಡ ಹೋರಾಟದಲ್ಲಿ ನಡೆದ ಪೊಲೀಸ್‌ ಲಾಠಿಚಾರ್ಜ್‌ ಖಂಡಿಸಿ ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ(ನಡಹಳ್ಳಿ) ಅವರ ನೇತೃತ್ವದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಎಪಿಎಂಸಿ ಶ್ರೀ ಗಣೇಶ ದೇವಸ್ಥಾನದಿಂದ ಕಪ್ಪು ಪಟ್ಟಿ ಕಟ್ಟಿಕೊಂಡು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಸವೇಶ್ವರ ವೃತ್ತದಲ್ಲಿ ರಾಸ್ತಾ ರೋಕೋ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.