ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ಹಿನ್ನೆಲೆಯಲ್ಲಿ ಇ.ಡಿ. (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ಮುಡಾ ಕಚೇರಿ ಮೇಲೆ ಶುಕ್ರವಾರ ದಾಳಿ ನಡೆಸಿದ್ದು, ದಾಖಲಾತಿಗಳ ಪರಿಶೀಲನೆ ಆರಂಭಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ಸೈಟುಗಳನ್ನು ಹಿಂತಿರುಗಿಸಿ, ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಯಾರೊಂದಿಗೂ ಚರ್ಚಿಸದೇ ಸೈಟು ವಾಪಸು ಮಾಡಿದ್ದೇನೆ. ಎಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
ಮುಡಾ ಕಡತದಲ್ಲಿದ್ದ ನೈಜ ದಾಖಲೆ ನಾಶಪಡಿಸಿ, ಸುಳ್ಳು ದಾಖಲೆ ಸೇರಿಸಿರುವ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ ಮೊದಲಾದವರ ವಿರುದ್ಧ ದೂರು ದಾಖಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ದೂರು