ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಗೆ ಅಗತ್ಯ ಕ್ರಮ ವಹಿಸಿ
Feb 20 2025, 12:47 AM ISTದ್ವಿತೀಯ ಪಿಯುಸಿ ಪರೀಕ್ಷೆಗಳು ಮಾ.೧ರಿಂದ ೨೦ರವರೆಗೆ ಬೆಳಗ್ಗೆ ೧೦ ಗಂಟೆಯಿಂದ ಮಧ್ಯಾಹ್ನ ೧ ಗಂಟೆಯವರೆಗೆ ನಡೆಯಲಿದ್ದು, ಯಾವುದೇ ಲೋಪದೋಷಗಳಾಗದಂತೆ ನಿಗಾವಹಿಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತ ಮುತ್ತ ೨೦೦ ಮೀಟರ್ ಪ್ರದೇಶವನ್ನು ನಿಗಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝೆರಾಕ್ಸ್ ಅಂಗಡಿ ಮತ್ತು ಸೈಬರ್ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದರು.