ದೀರ್ಘಾವಧಿ ಬಳಿಕ ಸಕಲೇಶಪುರ ಪುರಸಭೆ ಸಾಮಾನ್ಯ ಸಭೆ
Dec 31 2024, 01:01 AM ISTಸಕಲೇಶಪುರ ಪುರಸಭೆ ಸಭಾಂಗಣದಲ್ಲಿ ಪುರಸಭೆ ಅಧ್ಯಕ್ಷೆ ಜ್ಯೋತಿರಾಜ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಸದಸ್ಯ ಕಾಡಪ್ಪ ಸ್ವಚ್ಚತೆ ಕಾರ್ಯಕೈಗೊಳ್ಳುವ ಪೌರಕಾರ್ಮಿಕರಿಗೆ ಮನೆಗಳಿಲ್ಲದ್ದಾಗಿದ್ದು, ಚಳಿಮಳೆಯಲ್ಲಿ ದಿನ ಕಳೆಯುವಂತಾಗಿದೆ. ಕೊಡಲೇ ಇವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂದರು. ಇದಕ್ಕೆ ಉತ್ತರಿಸಿದ ಶಾಸಕ ಸುಮಾರು ೭ ಕೋಟಿ ರು. ವೆಚ್ಚದಲ್ಲಿ ಪುರಸಭೆ ಪೌರಕಾರ್ಮಿಕರಿಗೆ ೬೨ ಮನೆಗಳನ್ನು ನಿರ್ಮಿಸಲಾಗುತ್ತಿದೆ ತಾಂತ್ರಿಕ ಕಾರಣದಿಂದ ವಿಳಂಬವಾಗಿದೆ, ಈ ಬಗ್ಗೆ ಗಮನಹರಿಸಲಾಗುವುದು ಎಂದರು.