ಸಕಲೇಶಪುರ ಪುರಸಭೆ ಆವರಣ ದುರಸ್ತಿಗೆ ಚಾಲನೆ
Nov 21 2024, 01:02 AM ISTಸಕಲೇಶಪುರ ಪಟ್ಟಣದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ಕೊಡಲಾಗುತ್ತದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಪುರಸಭೆಯ ಆವರಣ ಸಂಪೂರ್ಣ ಹದಗೆಟ್ಟಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಆವರಣವನ್ನು ದುರಸ್ತಿಪಡಿಸಬೇಕು ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿಯಿಂದ ತಾಲೂಕು ಪಂಚಾಯ್ತಿಗೆ ಹೋಗುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಇಲ್ಲಿ ರಸ್ತೆ ಕಾಮಗಾರಿ ಮಾಡಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು ಎಂದರು.