ಹೊಸದುರ್ಗ ಪುರಸಭೆ ಬಹುತೇಕ ಬಿಜೆಪಿ ತೆಕ್ಕೆಗೆ
Aug 22 2024, 12:56 AM ISTಹೊಸದುರ್ಗ ಪುರಸಭೆಯ ಅಧ್ಯಕ್ಷ - ಉಪಾಧ್ಯಕ್ಷ ಆಯ್ಕೆ ಸಂಬಂಧ ಇಂದು ( ಆ.21) ಚುನಾವಣೆ ನಡೆಯಲಿದ್ದು ಅಧ್ಯಕ್ಷ - ಉಪಾಧ್ಯಕ್ಷ ಸ್ಥಾನ ಬಹುತೇಕ ಬಿಜೆಪಿಯ ತೆಕ್ಕೆಗೆ ಬೀಳಲಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನ ಬಿಸಿಎಂ (ಎ) ಮಹಿಳೆಗೆ ಮೀಸಲಾಗಿದೆ. ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ 18 ನೇ ವಾರ್ಡನ ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿರುವ ಶಂಕರಪ್ಪ, 19ನೇ ವಾಡ್ನ ಮೀಸಲು ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿರುವ ರಾಜೇಶ್ವರಿ ಅನಂದ್, ಬಿಸಿಎಂ (ಎ) ಮಹಿಳೆಗೆ ಮೀಸಲಾಗಿರುವ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್‌ನ ಸದಸ್ಯೆ ತಹೀರಾ ಬಾನು, ಬಿಜೆಪಿಯ ಜ್ಯೋತಿ ಕೆಂಚಪ್ಪ ಅರ್ಹರಾಗಿದ್ದಾರೆ.