ವೃತ್ತಿಯಲ್ಲಿ ಆರೋಗ್ಯಕರ ಪೈಪೋಟಿ ಇರಲಿ: ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ
Jan 26 2024, 01:47 AM ISTಛಾಯಾಗ್ರಹಣ ಕ್ಷೇತ್ರದಲ್ಲಿ ಆರೋಗ್ಯಕರ ಪೈಪೋಟಿ ಇರಬೇಕು, ಪೈಪೋಟಿ ಹೆಚ್ಚಾಗಿದೆ. ದರ ಪೈಪೋಟಿಗಿಂತ ಉತ್ತಮ ಗುಣಮಟ್ಟದ ಸೌಲಭ್ಯವನ್ನು ಗ್ರಾಹಕರಿಗೆ ನೀಡಿಲು ಮುಂದಾಗಬೇಕು ಎಂದು ಪಟ್ಟಣ ಪುರಸಭೆ ಅದ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ತಿಳಿಸಿದರು. ಬೇಲೂರಿನಲ್ಲಿ ಆಯೋಜಿಸಿದ್ದ ವೃತ್ತಿ ನಿರತ ಛಾಯಾಗ್ರಾಹಕ ಸಂಘದ ೧೨ ನೇ ವರ್ಷದ ವಾರ್ಷಿಕೋತ್ಸವ ಸಮಾರಂಭದ ಉದ್ಘಾಟಿಸಿ ಮಾತನಾಡಿದರು.