ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ನಡೆಗೆ ಆಕ್ಷೇಪ
Mar 19 2025, 12:45 AM ISTಕನ್ನಡಪ್ರಭ ವಾರ್ತೆ ಸಿಂದಗಿ ಪುರಸಭೆಯ ಯಾವುದೇ ಕಾರ್ಯ ಕಲಾಪಗಳಿಗೆ ನಮ್ಮ ಅಭಿಪ್ರಾಯ ಕೇಳುತ್ತಿಲ್ಲ. ಕುಟುಂಬ ಮತ್ತು ಸ್ವ-ಆಸ್ತಿಯ ಗಣಕೀಕೃತ ಉತಾರ ಮಾಡಿಕೊಳ್ಳುವಾಗ ಪುರಸಭೆ ಖಾತೆಗೆ ಜಮೆ ಮಾಡಬೇಕಾದ ತೆರಿಗೆ ಹಣ ಪಾವತಿ ಮಾಡಿಲ್ಲ. ಜೊತೆಗೆ ನಕಲಿ ಚಲನ್ ಸೃಷ್ಟಿಸಿ ಪುರಸಭೆಗೆ ತೆರಿಗೆ ಹಣವನ್ನೇ ಸಂದಾಯ ಮಾಡಿಲ್ಲ. ಇದಕ್ಕೇನು ಉತ್ತರ ನೀಡುತ್ತಾರೆ ಎಂದು ಪುರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ವಿರುದ್ಧ ಸದಸ್ಯ ಶಾಂತವೀರ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದರು.