ಬೇಲೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಪುರಸಭೆ ಅಧ್ಯಕ್ಷರ ಆಗ್ರಹ
Feb 01 2025, 12:00 AM ISTಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿದ ಜಾಗವನ್ನು ಗುರುತಿಸಿ ಅಭಿವೃದ್ಧಿಪಡಿಸಲು ಸಿದ್ಧ ಎಂದು ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ಸಲ್ಮಾ ಕೆ. ಪಾಹಿಮಾ ಹೇಳಿದರು. ಶುಕ್ರವಾರ ಬೇಲೂರು ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಇಲಾಖೆಗೆ ಸಂಬಂಧಿಸಿದ ಜಾಗಗಳನ್ನು ಗುರುತಿಸಿ ಬೇಲೂರು ದೇವಸ್ಥಾನ ವಿಶ್ವ ಪರಂಪರೆ ಪಟ್ಟಿಗೆ ಸೇರಿರುವುದರಿಂದ ಪ್ರವಾಸಿಗರು ಹೆಚ್ಚು ಬರುತ್ತಾರೆ. ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು, ದೇವಸ್ಥಾನದ ಸುತ್ತಮುತ್ತ ಸ್ವಚ್ಛತೆಗೆ ಆದ್ಯತೆ ಕೊಡಬೇಕು ಎಂದರು.