ಸೇವಾನಿರತ ಮಹಿಳಾ ಪೌರ ಕಾರ್ಮಿಕರ ಮೇಲೆ ಹಲ್ಲೆ
Feb 23 2025, 12:31 AM ISTಸೇವಾನಿರತ ಮಹಿಳಾ ಪೌರಕಾರ್ಮಿಕರ ಮೇಲೆ ಮುಸ್ಲಿಂ ಯುವಕ ಮನ್ನು ಮತ್ತು ಆತನ ತಾಯಿ ಸೇರಿ ಅವಾಚ್ಯ ಶಬ್ಧಗಳಿಂದ ನಿಂದಿಸಿ, ದೊಣ್ಣೆಯಿಂದ ಹಲ್ಲೆ ಮಾಡಿರುವ ಘಟನೆ ನಗರದ ೨೩ನೇ ವಾರ್ಡ್‌ನಲ್ಲಿ ಶನಿವಾರ ನಡೆದಿದೆ. ನಮ್ಮ ಮನೆ ಮುಂದೆ ಏಕೆ ಕೊಳೆತಿರುವ ಕಸ ಹಾಗೂ ತ್ಯಾಜ್ಯದ ಗುಡ್ಡೆ ಹಾಕಿದ್ದೀರಾ ಎಂದು ಏಕವಚನದಲ್ಲಿ ಬಾಯಿಗೆ ಬಂದಂತೆ ನಿಂದಿಸಿದ್ದಲ್ಲದೆ, ಮನೆಯಲ್ಲಿದ್ದ ದೊಣ್ಣೆ ತಂದು ಹಲ್ಲೆ ಮಾಡಿ ದುರ್ವರ್ತನೆ ತೋರಿದ್ದಾರೆ. ಮಹಿಳಾ ಪೌರ ಕಾರ್ಮಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಜೊತೆಯಲ್ಲಿದ್ದವರು ಕೂಡಲೇ ಅವರನ್ನು ನಗರದ ಸರ್ಕಾರಿ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲು ಚಿಕಿತ್ಸೆ ಕೊಡಿಸುತ್ತಿದ್ದಾರೆ.