ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪಾತ್ರವೇ ಇಲ್ಲ. ಹೀಗಾಗಿ ಪ್ರಿಯಾಂಕ್ ಖರ್ಗೆ ಪರ ಎಲ್ಲಾ ಸಚಿವರು ಗಟ್ಟಿಯಾಗಿ ನಿಲ್ಲಬೇಕು. ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ಮುಂದಿಟ್ಟುಕೊಂಡು ರಾಜೀನಾಮೆ ನೀಡುವಂತೆ ಆಗ್ರಹಿಸಬೇಕು ಎಂದು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಆತ ಗುತ್ತಿಗೆದಾರನಾಗಿದ್ದ, ಟೆಂಡರ್ ಹಾಕುವಲ್ಲಿ ಹಣದ ವಹಿವಾಟು ನಡೆದಿತ್ತು. ಮೋಸ ಹೋಗಿದ್ದಾನೆ ಎಂಬೆಲ್ಲಾ ಆರೋಪಗಳು ಇದುವರೆಗೂ ಕೇಳಿ ಬಂದಿದ್ದವು. ಇದೀಗ ಸಚಿನ್ ಗುತ್ತಿಗೆದಾರ ಹೌದೋ, ಅಲ್ಲವೋ ಎಂಬ ಶಂಕೆ ಉದ್ಭವವಾಗಿದೆ.
ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ವರ್ತೂರು ಪ್ರಕಾಶ್ ಆಪ್ತೆ ಶ್ವೇತಾಗೌಡ ವಿರುದ್ಧ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ವಂಚನೆ ಪ್ರಕರಣ ದಾಖಲಾಗಿದೆ.