ಪಿಎಸೈ ಪರಶುರಾಮ್ ಸಾವಿನ ಪ್ರಕರಣ ತನಿಖೆ ಸಿಬಿಐಗೆ ?
Aug 07 2024, 01:04 AM ISTಪಿಎಸೈ ಪರಶುರಾಮ್ ಶಂಕಾಸ್ಪದ ಸಾವಿನ ಪ್ರಕರಣ ಸಿಬಿಐ ತನಿಖೆಗೊಳಪಡುವ ಬಹುತೇಕ ಸಾಧ್ಯತೆಗಳು ಕಂಡುಬರುತ್ತಿವೆ. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆ ವಹಿಸಿದೆಯಾದರೂ, ಸಿಬಿಐಗೆ ವಹಿಸುವಂತೆ ಕುಟುಂಬಸ್ಥರು ಹಾಗೂ ರಾಜ್ಯ ಬಿಜೆಪಿ ನಾಯಕರು ಆಗ್ರಹಿಸಿದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ ಸಿಬಿಐಗೆ ಪ್ರಕರಣ ಕೊಡಲು ಕ್ರಮಕ್ಕೆ ಮುಂದಾಗಿದೆ ಎಂದು ಮೂಲಗಳು ಹೇಳಿವೆ.