ಹೆಣ್ಣು ಭ್ರೂಣ ಹತ್ಯೆ ಪ್ರಕರಣ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ಥಳಕ್ಕೆ ಭೇಟಿ
May 08 2024, 01:10 AM ISTಯಾರ ಗಮನಕ್ಕೂ ಬಾರದೆ ಹಲವು ವರ್ಷಗಳಿಂದ ಹೆಣ್ಣು ಭ್ರೂಣಹತ್ಯೆ ನಡೆಯುತ್ತಿರುವುದು ಸಮಾಜ ತಲೆ ತಗ್ಗಿಸುವ ಕೆಲಸವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ತರ ವಿರುದ್ಧ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಬೇಕು. ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಪಕ್ಕದಲ್ಲಿ ಮತ್ತು ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಇಂತಹ ಕಾನೂನು ಬಾಹಿರ ಕೃತ್ಯ ನಡೆಯುತ್ತಿರುವುದು ಆಘಾತಕಾರಿ ವಿಷಯ. ಇದರಲ್ಲಿ ಯಾವ ಅಧಿಕಾರಿಗಳ ಕೈವಾಡವಿದೆ ಎನ್ನುವುದು ತನಿಖೆಯಿಂದಷ್ಟೇ ಬೆಳಕಿಗೆ ಬರಬೇಕಿದೆ.