ಪ್ರಜ್ವಲ್, ಎಚ್.ಡಿ ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ
May 03 2024, 01:05 AM ISTಹಾಸನದಲ್ಲಿ ಪೆನ್‌ಡ್ರೈವ್ ಮೂಲಕ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳನ್ನು ಹರಿಯಬಿಡಲಾಗಿದೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇಂತಹ ಕೃತ್ಯದ ವಿರುದ್ಧ ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ರೀತಿಯ ಚಿತ್ರಗಳು ಮತ್ತು ದೃಶ್ಯಗಳ ಮೂಲಕ ಮಹಿಳೆಯರ ಘನತೆ ಮತ್ತು ಖಾಸಗಿ ಬದುಕಿನ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.