ಕಾಂಗ್ರೆಸ್ಗೆ ಪ್ರಧಾನಿ ಯಾರಂತ ಗೊತ್ತಿಲ್ಲ
Apr 14 2024, 01:48 AM ISTಬೆಳಗಾವಿ: ನಾವು ನಮ್ಮ ನಾಯಕರು ಮೋದಿಯವರು ಅಂತಾ ಹೇಳುತ್ತೇವೆ. ಕಾಂಗ್ರೆಸ್ನವರಿಗೆ ಪ್ರಧಾನಿ ಯಾರು ಅಂತಾ ಗೊತ್ತಿಲ್ಲ ಎಂದು ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ವ್ಯಂಗ್ಯವಾಡಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾದಲ್ಲಿ ಶನಿವಾರ ನಡೆದ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಐಎನ್ಡಿ ಒಕ್ಕೂಟ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಒಪ್ಪುತ್ತಿಲ್ಲ. ಕಾಂಗ್ರೆಸ್ನವರು ಇಂದು ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.