ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ ಹೇಳಿಕೆ

Jan 27 2024, 01:16 AM IST
ಜಿಲ್ಲೆಯಲ್ಲಿ ಪ್ರವಾಸೋದ್ಯಮ ಆಭಿವೃದ್ಧಿ ವಿಫುಲ ಅವಕಾಶಗಳಿದ್ದು, ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರವಾಸೋದ್ಯಮದಲ್ಲಿ ಅಭಿವೃದ್ಧಿ ಕಾಣದಿರುವುದು ಬೇಸರ ತಂದಿದೆ. ಜೋಗ, ಗುಡವಿ, ಸಕ್ರೆಬೈಲು, ಸಿಂಹಧಾಮ ಸೇರಿದಂತೆ ಅನೇಕ ಪ್ರೇಕ್ಷಣೀಯ ಮತ್ತು ಐತಿಹಾಸಿಕ ಸ್ಥಳಗಳನ್ನು ಅಭಿವೃದ್ಧಿ ಜೊತೆಗೆ ವೈದ್ಯಕೀಯ ಪ್ರವಾಸೋದ್ಯಮ, ಕೈಗಾರಿಕಾ ಪ್ರವಾಸೋದ್ಯಮ ಮತ್ತಿತರ ಕ್ಷೇತ್ರಗಳಲ್ಲಿ ದೊರೆಯಬಹುದಾದ ಅವಕಾಶಗಳನ್ನು ಗುರುತಿಸಿ ಅಭಿವೃದ್ಧಿಗೊಳಿಸಲು ಚಿಂತನೆ ನಡೆಸಲಾಗಿದೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಮೂರ್ನಾಲ್ಕು ಸಭೆಗಳನ್ನು ಆಯೋಜಿಸಿ ಚರ್ಚಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಶಿವಮೊಗ್ಗದಲ್ಲಿ ಹೇಳಿದ್ದಾರೆ.